ಅಳಂದದಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ

ಕಲಬುರಗಿ.ಏ.20: ಅಳಂದ ಪಟ್ಟಣದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಮುಂಜಾಗ್ರತೆ ಕ್ರಮವಾಗಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.
ಇಲ್ಲಿ 75 ಜನ ಕೊರೋನಾ ಸೋಂಕಿತರಿಗೆ ಸ್ಥಳಾವಕಾಶ ಇರಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.