ಅಳಂದ: ಸಿಡಿಲಿಗೆ ಬಾಲಕ ಬಲಿ

ಅಳಂದ:ಏ.21: ತಾಲ್ಲೂಕಿನ ನರೋಣಾ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಹೊಲದಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿದ್ದಾನೆ.
12 ವರ್ಷದ ಬಾಲಕ ಮಹೇಶ ನಾಗರಾಜ ಕುಸನೂರ್ ಮೃತ ಬಾಲಕ.ಜಮೀನಿನಿಂದ ಎತ್ತಿನ ಬಂಡಿಯಲ್ಲಿ ಕುಳಿತು ಮನೆಗೆ ವಾಪಸ್ಸು ಬರುತ್ತಿದ್ದಾಗ ಸಿಡಿಲು ಬಡಿದಿದೆ.
ಅಳಂದ ತಾಲೂಕಿನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಗಾಳಿ ಸಹಿತ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿದಿವೆ. ನರೋಣಾ ಹತ್ತಿರ ಹಳ್ಳದಲ್ಲಿ ಟ್ರ್ಯಾಕ್ಟರ್‍ಗಳು ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಕ್ಕಿ ಹಾಕಿ ಕೊಂಡ ವರದಿಯಾಗಿದೆ.