ಅವಮಾನ, ಅನುಮಾನ, ಸನ್ಮಾನಗಳಿಲ್ಲದೆ ಸಾಧನೆ ಸಾಧ್ಯವಿಲ್ಲ.

ಸಂಜೆವಾಣಿವಾರ್ತೆ 

ಹರಪನಹಳ್ಳಿ.ಜ.30; ಸಮಾಜದಲ್ಲಿ ಗುಣ ಸಂಪನ್ನರಿಗಿಂತ ಗುಣಹೀನರೇ ಹೆಚ್ಚು ಸದ್ದು ಮಾಡುತ್ತಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಜಾಗರೂಕರಾಗಿರಬೇಕು ಎಂದು ನೀಲಗುಂದ ಗುಡ್ಡದ ವಿರಕ್ತ ಮಠದ ಶ್ರೀ ಚನ್ನಬಸವ ಶಿವಯೋಗಿ ಸ್ವಾಮೀಜಿ ಹೇಳಿದರು.ಪಟ್ಟಣದ ನಿಸರ್ಗ ಪದವಿ ಪೂರ್ವ ಕಾಲೇಜು ಎನ್.ಎಸ್.ಎಸ್ ಘಟಕ ಹಾಗೂ ಬುದ್ದ ಬಸವ ಅಂಬೇಡ್ಕರ್ ವಿಶ್ವ ಕಲ್ಯಾಣ ಸಂಸ್ಥೆಯ ಹೇಮರೆಡ್ಡಿ ಮಲ್ಲಮ್ಮ ಐ.ಟಿ.ಐ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ 2023.24 ಸಾಲಿನ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.ಅನುಭವ, ಛಲ, ಸತತ ಪ್ರಯತ್ನಗಳ ಮೂಲಕ ಗುರಿಯನ್ನು ಸಾಧಿಸಬಹುದು. ಅವಮಾನ, ಅನುಮಾನ, ಸನ್ಮಾನಗಳಿಲ್ಲದೆ ಸಾಧನೆ ಸಾಧ್ಯವಿಲ್ಲ. ಜೀವನಪ್ರೀತಿಯಿಂದ ಅಂತರAಗ ಗಟ್ಟಿಗೊಳ್ಳುತ್ತದೆ ಎಂದರು.ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಎಂ.ವಿ.ಅAಜಿನಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ. ಒದಗಿ ಬರುವ ಅವಕಾಶಗಳನ್ನು ಕೈಬಿಡಬಾರದು. ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮತ್ತು ಆತ್ಮವಿಶ್ವಾಸ ಮುಖ್ಯಎಂದರು.ಶ್ರೀ ಶರಣ ಬಸವ ಬುದ್ದ ಭೀಮಜೀ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗುಂಡಗತ್ತಿ ಕೊಟ್ರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ. ಹೆಚ್ಚು ಜ್ಞಾನ ಸಂಪಾದಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಜೀವನದ ಯಶಸ್ಸಿಗಾಗಿ ಉತ್ತಮ ಶಿಕ್ಷಣ ಪಡೆಯಬೇಕು ನಿರಂತರವಾದ ಪ್ರಯತ್ನ, ಪರಿಶ್ರಮ ಮತ್ತು ಛಲದ ಮೂಲಕ ಉದ್ದೇಶಿತ ಸಾಧನೆಯನ್ನು ಮಾಡಲು ಸಾಧ್ಯ ಎಂದರು.ಕೆ.ಎಸ್.ಆರ್ ಟಿಸಿ ಡಿಪೋ ಮ್ಯಾನೇಜರ್ ಮಂಜುಳಾ ಎಂ. ಸಾಹಿತಿ ಡಿ.ರಾಮನಮಲಿ. ಪುರಸಭೆ ಸದಸ್ಯ ಡಿ.ಅಬ್ದುಲ್ ರಹಿಮಾನ್ ಸಾಹೇಬ್ ಮಾತನಾಡಿದರು.ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಕೆ.ಆರ್ ಸುದೀಪ್ ಹಾಗೂ ಪೊಲೀಸ್ ಇಲಾಖೆಯ ಅಪರಾಧಿ ತನಿಖಾಧಿಕಾರಿಯಾಗಿ ನೂತನವಾಗಿ ಆಯ್ಕೆಯಾದ ಡಾ.ಕೆ.ಯರಿಸ್ವಾಮಿ ಮತ್ತು ದೇಶೀ ತಳಿಗಳಾದ ಗಿರ್ ಹಸುಗಳ ಉತ್ಪನ್ನ ಗಳಿಂದ ರೈತರಿಗಾಗಿ ಜೈವಿಕ ಔಷಧಿಗಳನ್ನು ತಯಾರಿಸಿದ ರಾಜು ಎಲಿಗಾರ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.