ಲಕ್ಷ್ಮೇಶ್ವರ,ಜೂ24: ಪಟ್ಟಣದ ಹೊಸ ಬಸ್ ನಿಲ್ದಾಣದಿಂದ ಶಿಗ್ಲಿ ನಾಕಾದವರಿಗೆ ನಿರ್ಮಿಸುತ್ತಿರುವ ಸಿಸಿ ರಸ್ತೆಯನ್ನು ಅ ವೈಜ್ಞಾನಿಕವಾಗಿ ಕೈಗೊಳ್ಳಲಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಗ್ಲಿ ನಾ ಕಾ ದಿಂದ ಅಂಚೆ ಕಛೇರಿ ವರೆಗೆ ನಿರ್ಮಿಸುತ್ತಿರುವ ಲೋಕೋಪಯೋಗಿ ಇಲಾಖೆಯ ಈ ರಸ್ತೆಯ ಕಾಮಗಾರಿ ಸಂಬಂಧ ಪಟ್ಟ ಇಲಾಖೆ ಇಂಜಿನಿಯರುಗಳ ಯಾವುದೇ ಮೇಲ್ವಿಚಾರಣೆಯಿಲ್ಲದೆ ಗುತ್ತಿಗೆದಾರರು ಮನಬಂದಂತೆ ಕಾರ್ಯನಿರ್ವಹಿಸುತ್ತಿದ್ದು ಈಗಾಗಲೇ ನಿರ್ಮಿಸಿರುವ ರಸ್ತೆಯ ಮೇಲೆ ಎಲ್ಲೆಂದರಲ್ಲಿ ನೀರು ಅಲ್ಲಲ್ಲಿ ನಿಂತು ರಸ್ತೆ ಸಮತಟ್ಟು ಆಗಿಲ್ಲ ಎಂಬುದನ್ನು ಸಾಬೀತುಗೊಳಿಸಲು ಸಾರ್ವಜನಿಕರೇ ದೂರುತ್ತಿದ್ದಾರೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೆ ವಿಷಯ ತಲುಪಿಸಿದರೂ ಹಾರಿಕೆ ಉತ್ತರ ನೀಡುತ್ತಿದ್ದಾರೆ.
ರಸ್ತೆಯ ಅಕ್ಕ ಪಕ್ಕದ ವ್ಯಾಪಾರಸ್ಥರು ಮಳೆಗಾಲ ಮುಂಚೆಯೇ ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದು ಮಳೆಗಾಲದಲ್ಲಿ ಸ್ಥಿತಿ ಹೇಗೆ ಎಂದು ಅವಲತ್ತುಕೊಳ್ಳುತ್ತಿದ್ದಾರೆ. ಲೋಕೋಪಯೋಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.