ಅಶೋಕಕುಮಾರಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕಲಬುರಗಿ,ನ.19-ಸುಭಾಶ್ಚಂದ್ರ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ಸೆಂಟ್ ಮೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಸಂಭ್ರಮ ಹಾಗೂ 67ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣಜಲಖೇಡ ಸರಕಾರಿ ಪ್ರೌಢಶಾಲೆ ಶಿಕ್ಷಕ ಅಶೋಕುಮಾರ ಕಮಲಾಪೂರಕರ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀನಿವಾಸ ಸರಡಗಿಯ ಡಾ.ರೇವಣಸಿದ್ಧ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ, ಡಾ.ಚಿ.ಸಿ.ನಿಂಗಣ್ಣ, ಬಿ.ಎಚ್.ನಿರಗುಡಿ, ಫಾದರ್ ಸಂತೋಷ, ವಿಜಯಕುಮಾರ ಪರುತೆ ಸೇರಿದಂತೆ ಮತ್ತಿತರರು ಇದ್ದರು.