ಅಶ್ವತ್ಥನಾರಾಯಣ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಭಾರಿ ಜನಾಂದೋಲನ

ಲಿಂಗಸುಗೂರು,ಫೆ.೨೩- ತಾಲೂಕಿನ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾದ ಬಿಜೆಪಿ ಪಕ್ಷದ ಸಚಿವ ಅಶ್ವಥ್ ನಾರಾಯಣ ರವರು ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಲೆ ಮಾಡಿ ಹಾಕಿ ಎಂದು ಹೇಳಿಕೆ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಬಿಜೆಪಿ ಸಚಿವ ಅಶ್ವಥ್ ನಾರಾಯಣ ಪ್ರತಿಭಟನೆ ನಡೆಸಿದ್ದಾರೆ.
ಆದರೆ ಅದರಂತೆ ಲಿಂಗಸುಗೂರು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಅಶ್ವತ್ ನಾರಾಯಣರ ಪ್ರಚೋದನಕಾರಿ ಭಾಷಣ ಹೇಳಿಕೆ ಖಂಡಿಸಿ ಲಿಂಗಸುಗೂರು ಭಾರಿ ಜನಾಂದೋಲನ ಮೂಲಕ ಪ್ರತಿಭಟಿಸುವ ಮುಖಾಂತರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಅಶ್ವತ್ಥನಾರಾಯಣರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ರಾಜ್ಯದಲ್ಲಿ ಸಾಮರಸ್ಯ ಕಾಪಾಡಲು ಸರ್ಕಾರ ಮುಂದಾಗಬೇಕು ಎಂದು ಎಂದು ಶಾಸಕ ಡಿ ಎಸ್ ಹೂಲಗೇರಿ ಇವರು ಪಟ್ಟಣದ ಹನುಮಂತ ದೇವರ ದೇವಸ್ಥಾನ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬರುವುದು ಖಚಿತವಾಗಿದೆ ಇದರಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ವೈಖರಿ ಮತ್ತು ಕೊಮು ಗಲಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಬಿಜೆಪಿ ಪಕ್ಷದ ನಾಯಕರು ಇತಿಹಾಸ ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ಖೇದಕರ ವಿಷಯವಾಗಿದೆ ಬಹುತೇಕ ಕಾಂಗ್ರೆಸ್ ಪಕ್ಷದ ನಾಯಕರು ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ ಶಾಸಕ ಡಿ ಎಸ್ ಹೂಲಗೇರಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಭೂಪನಗೌಡ ಪಾಟೀಲ್ ಮುದಗಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ದಾವುದ್ ಸಾಬ್ ಶರಣಪ್ಪಾ ಮೇಟಿ ಪಾಮಯ್ಯ ಮುರಾರಿ ಪ್ರಮೋದ್ ಕುಲಕರ್ಣಿ ಇಬ್ರಾಹಿಂ ಗ್ಯಾರಂಟಿ ಆರುಣ ಸಾಬ್ ಎಕ್ಬಾಲ್ ಸಾಬ್ ಸೇರಿದಂತೆ ಸಾವಿರಾರು ಮಹಿಳೆಯರು ಕಾರ್ಯಕರ್ತರು ಮುಖಂಡರು ಅಭಿಮಾನಿಗಳು ಇದ್ದರು.