ಅಸಂಘಟಿತ ಕಾರ್ಮಿಕ ವಲಯದ ರಾಜ್ಯ ಪದಾಧಿಕಾರಿಗಳ ಸಭೆ

ರಾಯಚೂರು,ಫೆ.೧೫ – ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ವಲಯದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು.
ಈ ಸಭೆಗೆ ರಾಷ್ಟ್ರೀಯ ಅಧ್ಯಕ್ಷ ಉದಿತ್ ರಾಜ್ ರವರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ರವರು ವಹಿಸಿ ಕಾರ್ಮಿಕ ವಿಭಾಗದ ಕುಂದುಕೊರತೆಗಳ ಬಗ್ಗೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಬಿ.ಎನ್. ಚಂದ್ರಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕದ ಉಸ್ತುವಾರಿಗಳಾದ ಅನಿಲ್ ಬೋಸ್, ಸಭೆಯಲ್ಲಿ ರಾಷ್ಟ್ರೀಯ ಸಂಯೋಜಕ ಡಾ. ಮಮತಾ, ಬೈಯಪ್ಪನಹಳ್ಳಿ ರಮೇಶ್, ರಾಜ್ಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಹಾಗೂ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.