ಅಸಹಾಯಕ ಪರಿಸ್ಥಿತಿಗೆ ಸಿಲುಕಿದ ಕಾಂಗ್ರೆಸ್: ಸ್ಮೃತಿ


ಗುವಹಟಿ,ಮಾ.೩೧- ಅಸ್ಸಾಂ ವಿಧಾನಸಭೆಗೆ ನಾಳೆ ಎರಡನೇ ಹಂತದ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.
ಈ ನಡುವೆ ಗುವಾಹಾಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಜೀವಂತವಾಗಿರಲು ಎಐಯುಡಿಎಫ್ ಬೆಂಬಲ ಪಡೆಯಲು ಅಸಹಾಯಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇತರೆ ಪಕ್ಷಗಳ ಬೆಂಬಲ ಪಡೆದು ರಾಜಕೀಯವಾಗಿ ಜೀವಂತವಾಗಿರುವ ಕೆಲಸಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗುತ್ತಿಲ್ಲ ಎಂದು ಅವರು ದೂರಿದ್ದಾರೆ.
ಎಐಯುಡಿ ಎಫ್ ಬೆಂಬಲ ಪಡೆದರೆ ಅದು ಎಲ್ಲಿ ಮತ್ತಷ್ಟು ಶಕ್ತಿಶಾಲಿಯಾಗಲಿರುವ ಎನ್ನುವ ಆತಂಕದಿಂದ ಕಾಂಗ್ರೆಸ್ ಪಕ್ಷ ಯಾರ ಬೆಂಬಲವನ್ನು ಪಡೆದಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.
ಚುನಾವಣೆಯಲ್ಲಿ ಜನರಿಗೆ ನೀಡಿರುವ ಭರವಸೆಯನ್ನು ರಾಜಕೀಯ ಪಕ್ಷಗಳು ಈಡೇರಿಸಬೇಕು ಈ ನಿಟ್ಟಿ ನಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲು ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಎರಡನೇ ಹಂತದಲ್ಲಿ ೩೯ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ ಈ ಹಿನ್ನೆಲೆಯಲ್ಲಿ ಈ ಹಂತದಲ್ಲಿ ಮೇಲುಗೈ ಸಾಧಿಸಲು ಬಿಜೆಪಿ-ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳು ಇನ್ನಿಲ್ಲದ ಹರಸಹಾಸ ನಡೆಸಿವೆ.
೩೯ ಕ್ಷೇತ್ರಗಳಿಗೆ ನಾಳೆ ನಡೆಯಲಿರುವ ಎರಡನೇ ಹಂತದ ಮತದಾನದಲ್ಲಿ ವಿವಿಧ ಪಕ್ಷಗಳಿಂದ ೩೪೫ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಅಸ್ಸಾಂನಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸರ್ವಾನಂದ ಸೋನಾವಾಲ ನೇತೃತ್ವದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದೆ ಇದಕ್ಕೆ ಕಡಿವಾಣ ಹಾಕಿ ಕಳೆದುಕೊಂಡಿರುವ ಅಧಿಕಾರವನ್ನು ಮರಳಿ ಪಡೆಯಲು ಕಾಂಗ್ರೆಸ್ ಪಕ್ಷ ಕೂಡ ಹೋರಾಟ.
ಏಪ್ರಿಲ್ ೬ರಂದು ಅಸ್ಸಾಂನಲ್ಲಿ ಮೂರನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ತಿಂಗಳ ಎರಡರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಅಸ್ಸಾಂ ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಅಂದು ಮತದಾರನ ಒಲವು ಯಾವ ಪಕ್ಷಕ್ಕೆ ಇದೆ ಎನ್ನುವುದು ಬಹಿರಂಗವಾಗಲಿದೆ