ಸಂಜೆವಾಣಿ ವಾರ್ತೆ
ಬಳ್ಳಾರಿ, ಮಾ.31: ಸಾಮಾಜಿಕ ಅಸಮಾನತೆ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರು ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಕುರಿತು ವಿಚಾರ ಸಂಕೀರ್ಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು 31ನೇ ಮಾರ್ಚ್ 1990 ರಂದು ಭಾರತ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿದ ದಿನ. ಆದ್ದರಿಂದ ಶಾಲೆಯ ಹಳೆ ವಿದ್ಯಾರ್ಥಿಗಳಾದ ನೀವು ಉತ್ತಮವಾಗಿ ಓದಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳುತ್ತಾ, ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂಬ ಅಂಬೇಡ್ಕರ್ ಘೋಷಣೆಯನ್ನು ಮಕ್ಕಳಿಂದ ಹೇಳಿಸಿದರು.
ಶಾಲೆಯ ಹಳೆ ವಿದ್ಯಾರ್ಥಿಗಳಾದ ರುದ್ರೇಶ,ಹರೀಶ್, ಕೃಷ್ಣ, ಕೇರಳಸ್ವಾಮಿ,ಚಂದ್ರಶೇಖರ್, ಭೀಮೇಶ್,ಶಿಕ್ಷಕರಾದ ರಾಮಾಂಜಿನೇಯ ಮುಂತಾದವರು ಉಪಸ್ಥಿತರಿದ್ದರು.