ಅಸ್ಸಾಂ, ಪ.ಬಂಗಾಳ ಮತದಾನ ದಾಖಲೆಯಾಗಲಿ ಮೋದಿ ಆಶಯ

ನವದೆಹಲಿ, ಮಾ. ೨೭: ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮತದಾರರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ.
ವಿಶೇಷವಾಗಿ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ನಾನು ಆಶಿಸುತ್ತೇನೆ ” ಎಂದು ಮೋದಿ ಹೇಳಿದ್ದಾರೆ.
“ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಅರ್ಹ ಮತದಾರರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಕೋರುತ್ತೇನೆ ” ಎಂದು ಅವರು ಟ್ವೀಟ್ ಮಾಡಿದ್ದಾರೆ.