ಅ.೨೦ ರಂದು ಕರವೇಯಿಂದ ಜ್ಞಾನಕಾಶಿ ಪ್ರಶಸ್ತಿ ಪ್ರದಾನ

ಸಂಜೆವಾಣಿ ವಾರ್ತೆ
ದಾವಣಗೆರೆ. ಆ.೧೬; ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಆ.೨೦ ರಂದು ಬೆಳಗ್ಗೆ ೧೧.೩೦ ಕ್ಕೆ ನಗರದ ಗುರುಭವನದಲ್ಲಿ ೨೦೨೨-೨೩ ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಐಚ್ಛಿಕ ವಿಷಯದಲ್ಲಿ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜ್ಞಾನಕಾಶಿ ಪ್ರಶಸ್ತಿ ಪ್ರದಾನ ಮತ್ತು ನೂತನ ಶಾಸಕರು,ಸಚಿವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್ ರಾಮೇಗೌಡ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಶಾಮನೂರು ಶಿವಶಂಕರಪ್ಪ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಡಿಡಿಪಿಐ ಜಿ.ಕೊಟ್ರೇಶ್,ವೇದಿಕೆ ಗೌರವಾಧ್ಯಕ್ಷ ವಾಸುದೇವ ರಾಯ್ಕರ್,ನರೇಂದ್ರ ಕುಮಾರ್,ಮಲ್ಯಾಡಿ ಪ್ರಭಾಕರ ಶೆಟ್ಟಿ,ಕೆ.ಎಂ ಮಂಜಣ್ಣ,ಪಾಮೇನಹಳ್ಳಿ ನಾಗರಾಜ್,ಎಂ ಆನಂದ್ ಮತ್ತಿತರರು ಆಗಮಿಸಲಿದ್ದಾರೆ ಎಂದರು.ಇದೇ ವೇಳೆ ದಾವಣಗೆರೆ ಉತ್ತರ- ದಕ್ಷಿಣ ವಲಯಮಟ್ಟದಲ್ಲಿ ೨೫೦ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕದೊಂದಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.ನಂತರ ಜಿಲ್ಲೆಯ ನೂತನ ಶಾಸಕರುಗಳಿಗೆ ಸನ್ಮಾನ ಮಾಡಲಾಗುವುದು.ಈ ಬಾರಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಬೆಂಗಳೂರಿನ ಇತಿಹಾಸ ತಜ್ಞ ಎ.ಎಸ್ ಧರ್ಮೇಂದ್ರ ಕುಮಾರ್ ಅರೇನಹಳ್ಳಿ‌ ಹಾಗೂ ಪರಿಸರ ರತ್ನ ಪ್ರಶಸ್ತಿಯನ್ನು ದೊಡ್ಡಬಾತಿ ತಪೋವನ ಸಮೂಹ ಸಂಸ್ಥೆಯ ಛೇರ್ಮನ್ ಡಾ.ಶಶಿಕುಮಾರ್ ಮೆಹರ್ವಾಡೆ ಅವರಿಗೆ ನೀಡಲಾಗುತ್ತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ವಾದುದೇವ ರಾಯ್ಕರ್,ಬಸಮ್ಮ,ಶಾಂತಮ್ಮ,ಸಂತೋಷ್,ಲೋಕೇಶ್,ಜಬೀವುಲ್ಲಾ,ಮಲ್ಲಿಕಾರ್ಜುನ್,ಗೋಪಾಲದೇವರಮನೆ ಮತ್ತಿತರರಿದ್ದರು.