ಅ. 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಕಲಬುರಗಿ,ಸೆ.27:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2023 ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಗತ್ ವೃತ್ತದಲ್ಲಿನ ಹೊಸ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಅವರು ಗೌರವ ಉಪಸ್ಥಿತಿವಹಿಸುವರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹಾಗೂ ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಿ. ಜಾಧವ, ಶಾಸಕರುಗಳಾದ ಬಿ.ಆರ್.ಪಾಟೀಲ, ಎಂ.ವೈ. ಪಾಟೀಲ, ಕನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ ಹಾಗೂ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಎಸ್., ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನಕುಮಾರ್ ಯು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.