ಕಲಬುರಗಿ,ಅ.10:ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಜಿಎಸ್‍ಸಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಇದೇ ಅಕ್ಟೋಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸದಸ್ಯರ ಹೆಸರು ಸೇರ್ಪಡೆ/ಬೇರ್ಪಡೆ/ತಿದ್ದುಪಡಿ, ಪಡಿತರ ಚೀಟಿಯಲ್ಲಿನ ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಪಡಿತರ ಪಡೆಯಲು ಇಚ್ಛೆ ವ್ಯಕ್ತಪಡಿಸುವ ಕುರಿತು ಸೇವೆಗಳನ್ನು ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಇದೇ ಅಕ್ಟೋಬರ್ 11 ರಿಂದ 13 ರವರೆಗೆ ಪಡೆಯಬಹುದಾಗಿದೆ.
ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇದನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್‍ಲೈನ್ ಸೆಂಟರ್‍ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.