ಅ.16 ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ:ಡಿಕೆಶಿ

ರಾಯಚೂರು, ಸೆ.12 ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅ.16 ರಂದು ಚುನಾವಣೆ ನಡೆಯಲಿದೆ.‌ ಈ ಕುರಿತು ರಾಯಚೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ
ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಯಮಾಳಿಗಳ‌ ಮಾನದಂಡದಂತೆ ಸದಸ್ಯರು ಸ್ಪರ್ಧೆ ಮಾಡಬಹುದು ಎಂದರು.
ತಮ್ಮ ಎರಡು ವರ್ಷದ ಅವಧಿ ಮುಗಿಯುತ್ತಿದೆ. ಮತ್ತೆ ಸ್ಪರ್ಧೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಪಕ್ಚದ ನಾಯಕರು ತೀರ್ಮಾನಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಕ್ಟೋಬರ್ 22 ಮತ್ತು 23 ರಂದು ಭಾರತ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಗೆ ಬರಲಿದೆ. ಕೃಷ್ಣಾ ನದಿಯಿಂದ ತುಂಗಭದ್ರಾ ನದಿಯವರೆಗೂ ರಾಹುಲ್ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ಶೇ.40 ರಷ್ಟು ಕಮೀಷನ್ ಪಡೆಯುತ್ತಿರುವ ಬಗ್ಗೆ ಆರೋಪ ಮಾಡಿದ್ದೇವೆ. ಆದರೆ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಈ ವಿಚಾರದಲ್ಲಿ ಯಾವುದೇ ಸವಾಲು ಎದುರಿಸಲು ಸಿದ್ಧ ಎಂದು ಡಿಕೆಶಿ ತಿರುಗೇಟು ನೀಡಿದರು.