ಅ. 16 ರಂದು ಹದಿಮೂರನೆಯ ಘಟಿಕೋತ್ಸವ

ಬೀದರ: ಅ.11: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರದಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11.30 ಗಂಟೆಗೆ ವಿಶ್ವವಿದ್ಯಾಲಯ ಸಭಾಂಗಣ ಬೀದರದಲ್ಲಿ ಹದಿಮೂರನೆಯ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ.

ಹದಿಮೂರನೆಯ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ.

ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರು, ಕರ್ನಾಟಕ ಸರ್ಕಾರ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಕೆ.ವೆಂಕಟೇಶವ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಡಾ.ಆರ್.ಸಿ.ಅಗ್ರವಾಲ್, ಉಪ ಮಹಾ ನಿರ್ದೇಶಕರು (ಕೃಷಿ ಶಿಕ್ಷಣ) ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿ ಅವರು ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.