ಅ.2 ರಂದು ಸಂಗಮ ಸಿರಿ’ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ, ಸೆ 21: ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ವಚನ ಸಾಹಿತ್ಯದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಅಕ್ಟೋಬರ್ 2 ರಂದುಸಂಗಮ ಸಿರಿ’ ಪ್ರಶಸ್ತಿ ಹಾಗೂ 10 ಸಾವಿರ ರೂ. ನಗದು ಹಾಗೂ ಫಲಕವನ್ನೊಳಗೊಂಡ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಡಾ. ಸಂಗಮೇಶ ಹಂಡಿಗಿ, ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತರಾದ ಜೆ. ಬಿ. ಗೌಡಪ್ಪಗೊಳ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಗಮ ಸಿರಿ ಪ್ರಶಸ್ತಿಗೆ ಗುಲಬುರ್ಗಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ವೀರಣ್ಣ ದಂಡೆ ಹಾಗೂ ಡಾ. ಜಯಶ್ರೀ ದಂಡೆ ದಂಪತಿಯನ್ನು ಆಯ್ಕೆ ಮಾಡಲಾಗಿದೆ ಎಂದರು.