ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆ

ಕಲಬುರಗಿ,ಆ.16: ಇದೇ ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಭೆಯಲ್ಲಿ ಜಿಲ್ಲಾಡಳಿತದ ತಹಶೀಲ್ದಾರ ಸೈಯದ ನಿಸಾರ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತ್ತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಕ್ಟೋಬರ್ 23 ರಂದು ಆಚರಿಸಲು ಸಭೆಯ ಮುಖಂಡರು ನಿರ್ಧರಿಸಲಾಯಿತು.
ಅಂದು ಬೆಳಿಗ್ಗೆ 11. ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಡಾ.ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಅಧಿಕಾರಿಗಳು ತಮಗೆ ನೀಡಿದ ಕೆಲಸಗಳನ್ನು ಕಟ್ಟುನಿಟ್ಟಾಗಿ ಪಾಸಲಿಸಬೇಕೆಂದು ತಹಶೀಲ್ದಾರ್ ಸೈಯದ್ ನಿಸಾರ್ ಅಹ್ಮದ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆ ಒಬ್ಬ ಸಮಿತಿ ಅಧ್ಯಕ್ಷರನ್ನು ಹಾಗೂ ಉಪನ್ಯಾಸಕರನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಅವರು ಮಾತನಾಡಿ, ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ವೇದಿಕೆ ಅಲಂಕಾರ ಮಾಡಲಾಗುವುದು ಆಮಂತ್ರಣ ಪತ್ರಗಳು ಮುದ್ರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಅಂದು ನಡೆಯುವ ಜಯಂತಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಸರಕಾರಿ ಅರೆ ಸರಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ತಾಲೂಕು ಕಚೇರಿಗಳಲ್ಲಿ ಬೆಳಿಗ್ಗೆ 9 ಗಂಟೆ ಜಯಂತಿಯನ್ನು ಆಚರಿಸಬೇಕೆಂದರು.
ಕುಡಿಯುವ ನೀರು ಸ್ಪಚ್ಫತೆ ಕಾಪಾಡಿಕೊಂಡು ಹೋಗಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಮುಖಂಡರುಗಳು ತಮ್ಮ ಸಲಹೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಮುಖಂಡರು ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶ್ರೀ ಶರಣಕುಮಾರ ಮೋದಿ, ಕಾರ್ಯದರ್ಶಿ ಶ್ರೀಮತಿ ಶೀಲಾ ಮುತ್ತಿನ, ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹಿರೇಮಠ, ಸಂಘಟನ ಕಾರ್ಯದರ್ಶಿ ಅಪ್ಪು ಗುಬ್ಯಾಡ, ಮಹಿಳಾ ಘಟಕದ ನಗರ ಅಧ್ಯಕ್ಷ ನಾಗವೇಣಿ ಪಾಟೀಲ ರೇವೂರ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗ¼ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು