ಅ. 28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕಲಬುರಗಿ,ಅ.26:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 28 ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಗೌರವ ಉಪಸ್ಥಿತಿವಹಿಸುವರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಿ. ಜಾಧವ, ಶಾಸಕರುಗಳಾದ ಬಿ.ಆರ್.ಪಾಟೀಲ, ಎಂ.ವೈ. ಪಾಟೀಲ, ಕನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ, ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚೆನ್ನಪ್ಪ ಆರ್. ಸುರಪೂರಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಎಸ್. ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಚಿತ್ತಾಪುರ ತಾಲೂಕಿನ ಚಿಂಚೋಳಿ (ಹೆಚ್) ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಶ್ರೀದೇವಿ ಗಂಗಾಧರ ಕಾಪ್ಸೆ ಅವರು ವಿಶೇಷ ಉಪನ್ಯಾಸ ನೀಡುವರು.
ಮೆರವಣಿಗೆಗೆ ಚಾಲನೆ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಆರಂಭಗೊಂಡ ಈ ಜಾಥಾವು ಕಲಬುರಗಿ ಡಾ. ಎಸ್.ಎಂ.ಪಂಡಿತ ರಂಗಮಂದಿರಕ್ಕೆ ಆಗಮಿಸಿ ಕೊನೆಗೊಳ್ಳಲಿದೆ.