ಅ.29 ಹೊಸಪೇಟೆಯಲ್ಲಿ ಪ್ರತಿಭಾ ಪುರಸ್ಕಾರ.


ಸಂಜೆವಾಣಿ ವಾರ್ತೆ
ಹೊಸಪೇಟೆ ಅ27: ಹಿಂದುಳಿದ ಸಮಾಜವಾದರೂ ನಮ್ಮ ಶ್ರಮದ ಮೂಲಕ ಸಮಾಜಮುಖಿ ಚಿಂತನೆಯ ನದಾಫ್ ಪಿಂಜಾರ್ ಸಮುದಾಯ ರಾಜ್ಯ, ರಾಷ್ಟ್ರ ಮಟ್ಟದ ಸಾಧಕರು ಹಾಗೂ ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಹೊನ್ನೂರಸಾಬ್ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊಸಪೇಟೆಯ ಸಾಯಿ ಲೀಲಾರಂಗ ಮಂದಿರದಲ್ಲಿ ಆಯೋಜಿಸೊರುವ ಕಾರ್ಯಕ್ರಮಕ್ಕೆ ನಾಡಿನ ಅನೇಕ ಗಣ್ಯರು ಆಗಮಿಸಲಿದ್ದಾರೆ.
ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಬಡ ಮಕ್ಕಳ ವಿದ್ಯಾಭ್ಯಾಸ, ಉನ್ನತ ಶಿಕ್ಷಣಕ್ಕೆ ನೆರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸೇರಿದಂತೆ ಆರ್ಥಿಕವಾಗಿ ಸಬಲಗೊಳಿಸುವ ಕಾರ್ಯದಲ್ಲಿ ತೊಡಗಿರುವ ನಾವು ಈ ಬಾರಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಬೆಳಿಗ್ಗೆ ಪುನೀತ್ ರಾಜಕುಮಾರ್ ನಮನ ಕಾರ್ಯಕ್ರಮ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ  95% ಅಂಕ ಪಡೆದ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರುಗಳಿಗೆ ಪುರಸ್ಕಾರ ಮಾಡಲು ತೀರ್ಮಾನಿಸಲಾಗಿದೆ
ಸಮಾಜದ‌ವರೆ ಆದ ಜ್ಯೂನಿಯರ್ ವಿಷ್ಣುವರ್ಧನ್ ಮನೋರಂಜನೆ ನೀಡಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಸಮಾಜದ ಹಿರಿಯ ಮುಖಂಡರಾದ ಪಿ.ಬಾಲೇಸಾಬ್, ರಫೀಕ್ ಶೇಕ್ಷಾವಲಿ, ಕಾಸೀಂಸಾಬ್, ದಾದಾವಲಿ ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು.