ಆಂಜನೇಯಸ್ವಾಮಿ ಪೂಜಾ ಕಾರ್ಯಕ್ರಮ

ಮೈಸೂರು:ಡಿ:31: ಹನುಮಂತೋತ್ಸವ ಸಮಿತಿ ವತಿಯಿಂದ ಶ್ರೀ ಆಂಜನೇಯ ಸ್ವಾಮಿಯ ಪೂಜಾಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಮೈಸೂರು ಜಾತಿ ಮತ ಪಕ್ಷಗಳ ಭೇದವಿಲ್ಲದೆ ಹನುಮ ಜಯಂತಿಯು ಕೋವಿಡ್-19 ನಿಯಮಾನುಸಾರವಾಗಿ ಹನುಮಂತೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಆಂಜನೇಯ ಸ್ವಾಮಿಯ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಿತ್ರನಟ ವಸಿಷ್ಠ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.