ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆದ್ಯತೆ

 ಸೊರಬ.ಏ.12: ಆಂತರಿಕವಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಪೂರಕವಾಗಿ ಅಭ್ಯರ್ಥಿಯನ್ನು ಆಯ್ಕೆಗೊಳಿಸಿರುವ ಕ್ರಮ ಅತ್ಯಂತ ಶ್ಲಾಘನೀಯ ಎಂದು ಸೊರಬ ಬಿಜೆಪಿ ಪಕ್ಷದ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಹೇಳಿದರು.ಪಟ್ಟಣದಲ್ಲಿ ಬುಧವಾರ ಬೆಳಗ್ಗೆ ಸವಿತಾ ಹೋಟೆಲ್ ನ ಆವರಣದಲ್ಲಿ ಬಿಜೆಪಿ ಪಕ್ಷದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು  ಪಕ್ಷವೆಂಬುದು ಗುರುವಿದ್ದಂತೆ ಅದರ ಸಿದ್ಧಾಂತ ಉದ್ದೇಶಗಳಿಗೆ ಅನುಗುಣವಾಗಿ ಸಂಘಟನಾತ್ಮಕ ಚಟುವಟಿಕೆಯಿಂದ ಕಾರ್ಯ ತತ್ಪರತೆಯನ್ನು ರೂಢಿಸಿಕೊಂಡಾಗ ಯಶಸ್ಸಿನ  ಹಾದಿ ತಲುಪಲು ಸಾಧ್ಯ ಎಂದ ಅವರು ಕಳೆದ 5 ವರ್ಷಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಆಗಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷದ ದೃಷ್ಟಿಯಿಂದ ಒಂದಾಗುವಾಗ ಅಗತ್ಯವಿದೆ ಎಂದರು ಅಭ್ಯರ್ಥಿಯ ಆಯ್ಕೆ ಮಾಡಿದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಮತ್ತು ಕೇಂದ್ರ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು.    ಸೊರಬ ಚುನಾವಣಾ ಉಸ್ತುವಾರಿ ಪ್ರಭಾರಿಯಾದ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಮಾತನಾಡಿ  ಬಿಜೆಪಿ   ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಗ್ರಾಮಗಳಲ್ಲಿ ಮನೆಮನೆಗೂ ತೆರಳಿ ಮತದಾರರಲ್ಲಿ ಅರಿವು ಮೂಡಿಸುವ ಮೂಲಕ ಜಾಗೃತಗೊಳಿಸಬೇಕಾಗಿದೆ ಎಂದು ಹೇಳಿದರು ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪ್ರಭಾರಿ ಮೋನಪ್ಪ ಭಂಡಾರಿ. ಮಂಡಲದ ಅಧ್ಯಕ್ಷ ಪ್ರಕಾಶ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು, ಮಲ್ಲಿಕಾರ್ಜುನ್, ದೇವೇಂದ್ರಪ್ಪ, ಈಶ್ವರ ಚನ್ನಪಟ್ಟಣ, ನಾಗಪ್ಪ, ಪ್ರಭಾಕರ್ ರಾಯ್ಕರ್, ಸುಧಾ ಶಿವಪ್ರಸಾದ್, ವಸುಂದರಾ ಭಟ್, ಗುರು ಕುಮಾರ್ ಪಾಟೀಲ್, ಎಂಡಿ ಉಮೇಶ್ , ಬರಗಿ ನಿಂಗಪ್ಪ, ಸೇರಿದಂತೆ ಮೊದಲಾದವರಿದ್ದರು.