
ಕಲಬುರಗಿ,ಆ.10:ಆಂಧ್ರಪ್ರದೇಶದ ರಾಜ್ಯಪಾಲರಾದ ಎಸ್. ಅಬ್ದುಲ್ ನಜೀರ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಆಗಸ್ಟ್ 11 ರಂದು ಶುಕ್ರವಾರ ಮಧ್ಯಾಹ್ನ 3.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ರಾಜ್ಯಪಾಲರು ಮಧ್ಯಾಹ್ನ 3.50 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೊರಟು ಸಂಜೆ 4.10 ಗಂಟೆಗೆ ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹಕ್ಕೆ ಆಗಮಿಸುವರು. ನಂತರ ರಾತ್ರಿ ಐವಾನ್ ಶಾಹಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 12 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ “MITAKSARA APPLIED SCIENCES OF BHARITIYA JURISPRUDENCE” ವಿಷಯ ಕುರಿತು ಜರುಗುವ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವರು.
ನಂತರ ಅಂದು ಮಧ್ಯಾಹ್ನ 12.10 ಗಂಟೆಗೆ ಕಲಬುರಗಿ ಐವಾನ್ ಶಾಹಿ ಅತಿಥಿ ಗೃಹಕ್ಕೆ ಆಗಮಿಸಿ, ನಂತರ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ಹೈದ್ರಾಬಾದ್‍ಗೆ ಪ್ರಯಾಣಿಸುವರು.