ಆಂಧ್ರ ಮಾಜಿ ಸಿಎಂ ರೋಸಯ್ಯ ನಿಧನ

Konijeti Rosaiah

ಹೈದರಾಬಾದ್,ಡಿ.೪- ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲ ಕೊನಿಜೇಟಿ ರೋಸಯ್ಯ ಇಂದು ನಿಧನರಾಗಿದ್ದಾರೆ. ಅವರಿಗೆ ೮೮ ವರ್ಷ ವಯಸ್ಸಾಗಿತ್ತು.
ಕೆಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರೋಸಯ್ಯ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ರೋಸಯ್ಯ ೨೦೦೯ ರಿಂದ ೨೦೧೦ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ೨ ತಿಂಗಳ ಕಾಲ ಕರ್ನಾಟಕದ ರಾಜ್ಯಪಾಲರಾಗಿ, ೨೦೧೧ ರಿಂದ ೨೦೧೬ರವರೆಗೆ ತಮಿಳುನಾಡು ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷದಲ್ಲಿ ದಶಕಗಳ ಕಾಲ ತಮ್ಮ ವೃತ್ತಿ ಜೀವನದಲ್ಲಿ ಹಲವಾರು ಬಾರಿ ಕಾಂಗ್ರೆಸ್ ಎಂಎಲ್‌ಸಿ ಶಾಸಕರಾಗಿ ಮತ್ತು ಲೋಕಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಬಾರಿ ಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ವಿಧಾನ ಸಭೆಯಲ್ಲಿ ೧೫ ಭಾರಿ ಬಜೆಟ್ ಮಂಡಿಸಿ ದಾಖಲೆಯನ್ನು ನಿರ್ಮಿಸಿದ್ದ ಅವರು, ಸದಾ ವಿವಾದಗಳಿಂದ ದೂರವಿದ್ದ ಅಪರೂಪದ ರಾಜಕಾರಣಿ.
ಸಂತಾಪ
ಜೆಡಿಎಸ್ ಮುಖಂಡ ಪಿ.ಎ. ಶರವಣ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.