ಆಂಬುಲನ್ಸ್ ಸೇವೆಗೆ ಶಾಸಕ ರಹೀಂಖಾನ್ ಚಾಲನೆ

ಬೀದರ್: ಮಾ.26:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಶಾಸಕರ ನಿಧಿಯಲ್ಲಿ ಎರಡು ಆಂಬುಲನ್ಸ್‍ಗಳ ಸೇವೆಗೆ ಶಾಸಕ ರಹೀಂಖಾನ್ ಬೀದರ್ ತಾಲ್ಲೂಕಿನ ಜನವಾಡದಲ್ಲಿ ಚಾಲನೆ ನೀಡಿದರು.

ಗ್ರಾಮೀಣ ಜನರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಶಾಸಕರ ನಿಧಿಯ ರೂ. 42 ಲಕ್ಷ ವೆಚ್ಚದಲ್ಲಿ ಜನವಾಡ ಹಾಗೂ ಚಿಲ್ಲರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲನ್ಸ್ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಯಿ- ಮಕ್ಕಳ ಆಸ್ಪತ್ರೆ ಹಾಗೂ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲು ಆಂಬುಲನ್ಸ್‍ಗಳು ನೆರವಾಗಲಿವೆ ಎಂದು ಹೇಳಿದರು.

ಜನವಾಡ ಹಾಗೂ ಚಿಲ್ಲರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮಗಳ ಜನ ಆಂಬುಲನ್ಸ್ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನನ್ನ ಅಧಿಕಾರ ಅವಧಿಯಲ್ಲಿ ಬೀದರ್ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಜನರ ಸೇವೆಯಲ್ಲಿ ನಿರಂತರ ತೊಡಗಿಸಿಕೊಂಡಿದ್ದೇನೆ. ಮತದಾರರು ಮತ್ತೊಮ್ಮೆ ಅವಕಾಶ ನೀಡಿದರೆ ಕ್ಷೇತ್ರವನ್ನು ಮಾದರಿಯಾಗಿಸುವ ಗುರಿ ಇದೆ ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಇದ್ದರು.