ಆಂಬ್ಯುಲೆನ್ಸ್‌ಗೆ ಟಿಪ್ಪರ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ


ಬಂಟ್ವಾಳ, ನ.೩- ಟಿಪ್ಪರ್ ಲಾರಿಯೊಂದು ಆಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನಿನೆನ ರಾತ್ರಿ ವೇಳೆ ನಡೆದಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ, ಅನಾಹುತ ತಪ್ಪಿದಂತಾಗಿದೆ.  
ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈಘಟನೆ ನಡೆದಿದೆ. ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ ಇದಾಗಿದೆ. ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಅಂಬ್ಯುಲೆನ್ಸ್ ವಾಹನದ ಮುಂಭಾಗದ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಸಾಗಿಸಿದ್ಧಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.