ಆಕಸ್ಮಿಕ ಬೆಂಕಿ : ನಷ್ಟ

ಹುಬ್ಬಳ್ಳಿ,ಏ20 : ಆಕಸ್ಮಿಕ ಬೆಂಕಿ ತಗುಲಿ ಅಂಗಡಿ ಹಾಗೂ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಕೋಳಿವಾಡ ಗ್ರಾಮದಲ್ಲಿಂದು ಬೆಳ್ಳಂ ಬೆಳಿಗ್ಗೆ ನಡೆದಿದೆ.
ಇಲ್ಲಿನ ಗ್ರಾಮದ ಶಂಭುಲಿಂಗ ಜಂತ್ಲಿ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಆಕಸ್ಮಿಕ ಬೆಂಕಿ ತಗುಲಿದ್ದ ವೇಳೆಯಲ್ಲಿ ಗ್ರಾಮಸ್ಥರು ನಂದಿಸಲು ಹರ ಸಾಹಸ ಪಟ್ಟಿದಾದರೂ ಅಂಗಡಿಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಇದ್ದ ಹಿನ್ನೆಲೆಯಲ್ಲಿ ಬೆಂಕಿ ಹತೋಟಿಗೆ ಬಾರದೇ ಮತ್ತಷ್ಟು ಬೆಂಕಿ ಆವರಿಸಿತು.
ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರು.
ಆಕಸ್ಮಿಕ ಬೆಂಕಿಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.