ಆಕ್ಸಿಜನ್ ಕಾನ್ಸಂಟ್ರೇಟರಗಳ ಕೊಡುಗೆ: ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರ

ವಿಜಯಪುರ, ಜೂ.2-ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ .ಟ್ರಸ್ಟ್ ವಿಜಯಪುರವರು 5 ಆಕ್ಸಿಜನ್ ಕಾನ್ಸಂಟ್ರೇಟರಗಳನ್ನು ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿದ್ದು,ಅವುಗಳನ್ನು ಸ್ವೀಕರಿಸಿ ಕೋವಿಡ್-19ರೋಗಿಗಳ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಿಂದ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆ ಇದ್ದು, ಹಲವಾರು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಸ್ವಯಂ ಪ್ರೇರಿತದಿಂದ ಕೊಡಮಾಡಿದ ಆಕ್ಸಿಜನ್ ಕಾನ್ಸಂಟ್ರೇಟರ್ (ಔxಥಿgeಟಿ ಅoಟಿಛಿeಟಿಣಡಿಚಿಣoಡಿ) ಗಳನ್ನು ಸ್ವೀಕರಿಸಿ, ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.