ಆಕ್ಸಿಜನ್ ಕೊರತೆಯಿಂದ ಮಹಿಳೆ ಸಾವು

ಪಿರಿಯಾಪಟ್ಟಣ:ಏ.26: ಆಕ್ಸಿಜನ್ ಕೊರತೆಯಿಂದ ಕೋವಿಡ್ ಗೆ ತುತ್ತಾಗಿದ್ದ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ಇಂದು ಬೆಳಿಗ್ಗೆ ಜರುಗಿದೆ.
ತಾಲ್ಲೂಕಿನ ವಿಶಾಲಾಕ್ಷಿ ಮ್ಮ(58) ಸಾವಿಗೀಡಾಗಿರುವ ಮಹಿಳೆ. ಇವರು ಕಳೆದ ಏಪ್ರಿಲ್ 20 ರಂದು ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಗ ಬೇಧಿ ನಿಲ್ಲದೆ ಕಾರಣ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿದ್ದ ಕಾರಣ ಮತ್ತೆ ಭಾನುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡುತ್ತಿರುವಾಗ ಮಹಿಳೆ ಸಾವನ್ನಪ್ಪಿದ್ದಾರೆ.
ಮಹಿಳೆ ಸಾವನ್ನಪ್ಪಿದ ಹಿನ್ನಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಮೃತರ ಕುಟುಂಬದವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮೊದಲು ಆಸ್ಪತ್ರೆಯವರೆ ಶವ ಸಂಸ್ಕಾರವನ್ನು ನಡೆಸುವುದಾಗಿ ತಿಳಿಸಿ ಈಗ ಶವವನ್ನು ಕುಟುಂಬದವರೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ.
ಆದರೆ ಕುಟುಂಬದವರು ಇಲಾಖೆಯವರೆ ಶವ ಸಂಸ್ಕಾರ ನಡೆಸಿಕೊಡಬೇಕು ಎಂದು ಪಟ್ಟು ಹಿಡಿದು ತಾಲೂಕು ಆರೋಗ್ಯಾಧಿಕಾರಿ ಹಾಗೂ ತಹಶೀಲ್ದಾರ್ ರವರ ಆಗಮನಕ್ಕಾಗಿ ಕಾಯುತ್ತಿದ್ದಾರೆ.