ಆಕ್ಸಿಜನ್ ಪ್ಲಂಟ್ ನಿರ್ಮಾಣಕಾರ್ಯ ಪ್ರಗತಿಯಲ್ಲಿ

ಕೊಪ್ಪಳ, ಮೇ.20- ಜಿಲ್ಲೆಯ ಜಿಲ್ಲಾಸ್ಪತ್ರೆ ಸೇರಿದಂತೆ ಗಂಗಾವತಿಯ ತಾಲ್ಲೂಕು ಆಸ್ಪತ್ರೆಯಲ್ಲಿ ನೂತನವಾಗಿ ೨ ಆಕ್ಸಿಜನ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಆಕ್ಸಿಜನ್ ಪ್ಲಾಂಟ್‌ಗಳ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದರು.
ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ೧೦೦೦
ಎಲ್‌ಪಿಎಂ(ಲೀಟರ್ ಪರ್ ಮೀಟರ್) ಸಾಮರ್ಥ್ಯದ ಹಾಗೂ ಗಂಗಾವತಿ ಆಸ್ಪತ್ರೆಯಲ್ಲಿ ೫೦೦ ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ