ಆಕ್ಸಿಜನ್ ಬೆಡ್ ಸಿದ್ಧ: ಡಾ. ರೇವಣಸಿದ್ದಪ್ಪ

ಬಾದಾಮಿ, ಮೇ2: ತಾಲೂಕಾ ಆಸ್ಪತ್ರೆಯಲ್ಲಿ ರೋಗಿಗಳಿಗಾಗಿಯೇ 50 ಸೆಂಟ್ರಲ್ ಪೈಪ್‍ಲೈನ್ ಆಕ್ಷಿಜನ್ ಬೆಡ್ ಕನೆಕ್ಷನ್ ಮಾಡಲಾಗಿದ್ದು, ಈಗಾಗಲೇ 10 ಬೆಡ್‍ಗಳನ್ನು ಕೋವಿಡ್ ರೋಗಿಗಳಿಗೆ ಸಿದ್ಧಪಡಿಸಲಾಗಿದೆ ಎಂದು ತಾಲೂಕಾಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಎಚ್.ರೇವಣಸಿದ್ದಪ್ಪ ತಿಳಿಸಿದರು.
ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಮಾಡಲಾದ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದ ಅವರು ಈಗಾಗಲೇ ಕೋವಿಡ್ ರೋಗಿಗಳಿಗೆ 10 ಬೆಡ್‍ಗಳಿಗೆ ಆಕ್ಷಿಜನ್ ಪೈಪಲೈನ್ ಕನೆಕ್ಷನ್ ಮಾಡಿ, ಸಿದ್ದಪಡಿಸಲಾಗಿದೆ. ಇನ್ನೂ 10 ಬೆಡ್‍ಗಳನ್ನು ಮೇಲಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಬರುವ ದಿನಗಳಲ್ಲಿ 50 ಬೆಡ್‍ಗಳನ್ನು ಕೋವಿಡ್ ರೋಗಿಗಳಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕೋವಿಡ್ ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ಎಲ್ಲರೂ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು. ಅವಶ್ಯಕವೆನಿಸಿದರೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಮಾಜಿಕ ಅಂತರ ಕಾಪಾಡಬೇಕೆಂದು ಮನವಿ ಮಾಡಿದರು.