ಆಕ್ಸಿಜನ್ ವೆಂಟಿಲೇಟರ್ ಪೂರೈಕೆಗೆ ಕ್ರಮ- ಲಿಂಬಾವಳಿ

ಕೆ.ಆರ್.ಪುರ, ಮೇ.೪- ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರತ್ಯೇಕ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಲಿ ಅವರು ತಿಳಿಸಿದರು.
ಮಾರತ್ತಹಳ್ಳಿಯಲ್ಲಿ ಆರೋಗ್ಯ,ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಸಭೆ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯಗಳ ಬೆಡ್ ಗಳ ಕೊರತೆ ಕಂಡು ಬಂದಿದ್ದು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನುಡಿದರು.
ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ತಂಡ ಕಾರ್ಯನಿರ್ವಹಿಸಲಿದ್ದು, ಸದ್ಯ ಇರುವ ಆಸ್ಪತ್ರೆಗಳ ಜೋತೆಗೆ ಪ್ರತ್ಯೇಕವಾಗಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯಗಳ ಬೆಡ್ ಗಳನ್ನು ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಸಂಘಸಂಸ್ಥೆಗಳು ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಮುಂದಾಗಿದ್ದು,ಅಧಿಕಾರಿಗಳು ಸಂಘಸಂಸ್ಥೆಗಳ ಸಹಕಾರವನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಮಹದೇವಪುರ ವಲಯ ಜಂಟಿ ಆಯುಕ್ತ ವೆಂಕಟಚಲಪತಿ, ಇಓ ಮಂಜುನಾಥ್, ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ ಮತ್ತಿತರರು ಇದ್ದರು.