ಆಕ್ಸಿಜನ್ ಸಾಂದ್ರಕಗಳ ಹಸ್ತಾಂತರ

ದಾವಣಗೆರೆ, ಜೂ. 9;ಸರ್ಕಾರದಿಂದ ಜಿಲ್ಲೆಗೆ ಮಂಜೂರಾಗಿರುವ 5 ಆಕ್ಸಿಜನ್ ಸಾಂದ್ರಕಗಳ ಪೈಕಿ ಒಂದು ಆಕ್ಸಿಜನ್ ಸಾಂದ್ರಕವನ್ನು ಆನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ, ಹಾಗೂ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣ ಇವರು ಹಸ್ತಾಂತರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ಬಿ. ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಡಿಹೆಚ್‌ಒ ಡಾ. ನಾಗರಾಜ್, ಡಾ.ಯತೀಶ್ ಇನ್ನುಳಿದ ತಾಲ್ಲೂಕು ಅಧಿಕಾರಿಗಳು ಇದ್ದರು.