ಆಗಸ್ಟ್ 10 ಕ್ಕೆ ಬಿಜನಳ್ಳಿಯಲ್ಲಿ ಮನೆ ಮನೆಗೆ ಗಂಗೆ ಉತ್ಸವ

ಸೇಡಂ, ಆ, 04 : ತಾಲೂಕಿನ ಬಿಜನಳ್ಳಿ ಗ್ರಾಮದಲ್ಲಿ ಆಗಸ್ಟ್ 10ರಂದು ಮನೆ ಮನೆಗೆ ಗಂಗೆ ಉತ್ಸವ (ಹರ ಘರ ಜಲ ಉತ್ಸವ) ಕಾರ್ಯಕ್ರಮ ಜರುಗಲಿದೆ ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ್ ಯಾದಗಿರಿ ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ನೀಲಹಳ್ಳಿ ಗ್ರಾಪಂ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.