ಆಗುಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ಸೋನಿಯಾ, ರಾಹುಲ್ ಸ್ಪಷ್ಟನೆಗೆ ಬಿಜೆಪಿ ಆಗ್ರಹ

ನವದೆಹಲಿ, ನ. 8- ಅಗುಸ್ತ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸ್ಪಷ್ಟನೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರು ನಾಯಕರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಥೋಡ್
ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ರಕ್ಷಣಾ ಇಲಾಖೆಗೆ ಸಂಬಂಧಿಸಿದ ಹಗರಣದಲ್ಲಿ ಕಾಂಗ್ರೆಸ್ ಪಕ್ಷದ ಹೆಸರು ಬರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸ್ಪಷ್ಟನೆ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ.

ಆಗುಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕ್ಯಾಪ್ಟರ್ ಖರೀದಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಈ ಆಗ್ರಹ ಮಾಡಿದ್ದಾರೆ‌

ನಿನ್ನೇಯೇ ಆಗ್ರಹ
ಜಮ್ಮು ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಗುಪ್ಕರ್ ವರದಿ ಜಾರಿಗೆ ಅಲ್ಲಿನ ಮಿತ್ರ ಪಕ್ಷಗಳ ಸದಸ್ಯರ ಜೊತೆ ಸೇರಿರುವ‌ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ಬಯಸಿತ್ತು.