ಆಘ್ಫಾನ್‌ನಲ್ಲಿ ಮತ್ತೆ ಭೂಕಂಪನ

ಕಾಬೂಲ್,ಮಾ.೨೮-ಎರಡು ದಿನಗಳ ಅಂತರದಲ್ಲಿ ಆಫ್ಘಾನಿಸ್ತಾನದಲ್ಲಿ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಅಫ್ಘಾನಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ ೪.೨ ತೀವ್ರತೆಯ ಭೂಕಂಪ ಸಂಭವಿಸಿದೆ.ಅಫ್ಘಾನಿಸ್ತಾನದಲ್ಲಿ ಮಂಗಳವಾರವೂ ಭೂಕಂಪನದ ಅನುಭವವಾಗಿದೆ., ಅದರ ತೀವ್ರತೆ ೪.೬ ಆಗಿತ್ತು. ಇದೀಗ ಇಂದು ಬೆಳಗ್ಗೆ ಮತ್ತೊಮ್ಮೆ ಭೂಕಂಪದಿಂದಾಗಿ ಅಫ್ಘಾನಿಸ್ತಾನದ ಭೂಮಿ ನಡುಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ನೀಡಿದೆ.
ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಭೂಕಂಪನದ ಅನುಭವವಾಗಿದೆ. ಗುರುವಾರ ಮುಂಜಾನೆ ೫:೪೪ ಕ್ಕೆ ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ ೪.೨ ಇತ್ತು. ಎನ್ ಸಿಎಸ್ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಕ್ಷಾಂಶ ೩೬.೩೬ ಮತ್ತು ರೇಖಾಂಶ ೭೧.೧೮ ೧೨೪ ಕಿಮೀ ಆಳದಲ್ಲಿ ಕಂಡುಬಂದಿದೆ. ಇದುವರೆಗೆ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ
ಕಳೆದ ವರ್ಷ ಅಕ್ಟೋಬರ್ ೭ ರಂದು, ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದಲ್ಲಿ ೬.೩ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.ಇದು ಅನೇಕ ಹಳ್ಳಿಗಳನ್ನು ನಾಶಪಡಿಸಿದೆ. ಇದು ಇತ್ತೀಚಿನ ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತ್ಯಂತ ಭೀಕರವಾದ ಭೂಕಂಪವೆಂದು ಪರಿಗಣಿಸಲಾಗಿದೆ.ಈ ಭೂಕಂಪದಲ್ಲಿ ೨,೦೦೦ ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡು ಅಸಂಖ್ಯಾತ ಜನ ನಿರಾಶ್ರಿತರಾಗಿದ್ದಾರೆ. ಹಲವಾರು ತಿಂಗಳುಗಳ ನಂತರವೂ, ಜನರು ಪುನರ್ನಿರ್ಮಾಣ ಮಾಡಲು ಹೆಣಗಾಡುತ್ತಿದ್ದಾರೆ.