
ಔರಾದ :ಆ.4: ಸ್ವಾತಂತ್ರ್ಯ ದಿನಾಚರಣೆ 75 ನೇ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಸೈಕಲ್ ಜಾಥಾ ಜರುಗಿತು.
ನಗರದ ಕನ್ನಡಾಂಬೆ ವೃತ್ತದಿಂದ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಅಮರೇಶ್ವರ ದೇಗುಲ ಸೇರಿದಂತೆ ನಗರದ ವಿವಿಧ ಬಡಾವಣೆಗಳ ಮೂಲಕ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸಮಾರೋಪಗೊಂಡಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವಕುಮಾರ ಘಾಟೆ ಮಾತನಾಡಿ ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಯುವಜನತೆಯನ್ನು ಸದೃಢಗೊಳಿಸುವುದು ಅಗತ್ಯವಾಗಿದೆ. ಯುವಜನರ ಶಾರೀರಿಕ ಬೆಳವಣಿಗೆಯು ಉತ್ತಮವಾಗಿರುವ ನಿಟ್ಟಿನಲ್ಲಿ, ಸೈಕ್ಲಿಂಗ್, ಅಭ್ಯಾಸ ರೂಡಿಸಿಕೊಳ್ಳಲು ಪೆÇ್ರೀತ್ಸಾಹಿಸಬೇಕಾಗಿದೆ. ಕೇಂದ್ರದ ಹರ ಘರ ತಿರಂಗಾ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಸೈಕಲ್ ಜಾಥಾದಲ್ಲಿ ತಹಶೀಲ್ದಾರ್ ಅರುಣಕುಮಾರ್ ಕುಲಕರ್ಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಕೇರಬಾ ಪವಾರ, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಶಿಕ್ಷಕರು ಸೇರಿದಂತೆ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.