ಆಜಾನ್ ನಿಲ್ಲಿಸಲು ನಿರ್ಧಾರ

ಬೆಂಗಳೂರು, ಮೇ೧೪- ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಮಾಡಿದ ಬೆನ್ನಲ್ಲೇ ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ ೫ ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.
ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ ಅವರು, ಇನ್ಮುಂದೆ ಬೆಳಿಗ್ಗೆ ೫ ಗಂಟೆಗೆ ಧ್ವನಿ ವರ್ಧಕಗಳಲ್ಲಿ ಆಜಾನ್ ಕೂಗದಂತೆ ಎಲ್ಲಾ ಮಸೀದಿ, ಮುಸ್ಲೀಂ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯಾಧ್ಯಂತ ಇರುವ ಮಸೀದಿಗಳಲ್ಲಿ ಬೆಳಿಗ್ಗೆ ೫ ಗಂಟೆ, ೫.೧೫, ೫.೩೦ಕ್ಕೆ ಮೈಕ್ ನಲ್ಲಿ ಆಜಾನ್ ಕೂಗಬಾರದು. ಸರ್ಕಾರ ಧ್ವನಿ ವರ್ಧಕ ಕುರಿತಂತೆ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕು. ಬೆಳಿಗ್ಗೆ ೬ ಗಂಟೆಯ ಬಳಿಕ ಪೊಲೀಸರಿಂದ ಅನುಮತಿ ಪಡೆದು, ಆಜಾನ್ ಕೂಗಲು ಸೂಚನೆ ನೀಡಿರೋದಾಗಿ ತಿಳಿಸಿದ್ದಾರೆ.