ಆಟೋ ಡಿಕ್ಕಿ – ಶಾಲಾಬಾಲಕಿ ಸಾವು.


ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಜು 4:- ಮನೆಯಿಂದ ಶಾಲೆಗೆ ನಡೆದುಕೊಂಡು ಹೊರಟಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಆಟೋ ಡಿಕ್ಕಿಯಾದ ಪರಿಣಾಮ ತಲೆಮೆದುಳು ಹೊರಬಂದು ತೀವ್ರಗಾಯಗೊಂಡು ಸ್ಥಳದಲ್ಲೇ  ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ 10ಗಂಟೆ ಸುಮಾರಿಗೆ ಪಟ್ಟಣದ ಹೊರವಲಯದ ಪಟ್ಟಣ ಪಂಚಾಯತಿ ವ್ಯಾಪ್ತಿಯ ಅಮರದೇವರ ಗೊಲ್ಲರಹಟ್ಟಿ ಗ್ರಾಮದಲ್ಲಿ ಜರುಗಿದೆ.
ಅಮರದೇವರಗುಡ್ಡ ಗೊಲ್ಲರಹಟ್ಟಿಯ ಸೃಷ್ಠಿ (9) ಮೃತಪಟ್ಟ ದುರ್ದೈವಿ ಶಾಲಾ ಬಾಲಕಿಯಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಈಕೆಯು ಮನೆಯಿಂದ ಶಾಲೆಗೆ ಹೋಗಲು ನಡೆದುಕೊಂಡು ಹೋಗುತ್ತಿರುವಾಗ್ಗೆ ಕೂಡ್ಲಿಗಿ ಕಡೆಗೆ ಬರುತ್ತಿದ್ದ ಆಟೋ ಚಾಲಕನ ಅತಿವೇಗ ಅಜಾಗರೂಕತೆಯಿಂದ ಆಟೋ ಬಾಲಕಿಗೆ  ತಗುಲಿದ್ದು ರಸ್ತೆಗೆ ಬಿದ್ದ ಬಾಲಕಿ ತಲೆ ಹಾಗೂ ಹಣೆ ಭಾಗದ ಮೆದುಳು ಹಾಗೂ ನರಗಳು ಹೊರಬಿದ್ದು ತೀವ್ರಗಾಯಗೊಂಡ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಆಟೋ ಚಾಲಕ ಪರಾರಿಯಾಗಿದ್ದಾನೆಂದು ತಿಳಿದಿದೆ. ಘಟನಾ ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.