ಆಟೋ ಮೊಬೈಲ್ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗುವತ್ತ ಭಾರತ ಹೆಜ್ಜೆ: ಓಂ ಬಿರ್ಲಾ

ನವದೆಹಲಿ,ಜ.13 ಭಾರತೀಯ ಆಟೋಮೊಬೈಲ್ ಕ್ಷೇತ್ರವು ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಇಂದಿಲ್ಲಿ ಹೇಳಿದ್ದಾರೆ.

ನವದೆಹಲಿಯಲ್ಲಿ ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ – ಎಫ್ ಎಡಿಎ ನ12 ನೇ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿ ಆಟೋಮೊಬೈಲ್ ಕ್ಷೇತ್ರವನ್ನು ಬಲಪಡಿಸಲು ಎಫ್‌ಎಡಿಎ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ನೀತಿ ನಿರೂಪಣೆ, ವ್ಯಾಪಾರ, ವಾಹನ ನೀತಿ ಮತ್ತು ವಾಹನ ನೋಂದಣಿ ಪ್ರಕ್ರಿಯೆಯಂತಹ ಅನೇಕ ವಿಷಯಗಳ ಕುರಿತು ಎಫ್ ಎ ಡಿಎ ಸಹಕಾರಿಯಾಗಿದೆ. ದೇಶದಲ್ಲಿ ಆಟೋಮೊಬೈಲ್ ಉದ್ಯಮದ ಅಭಿವೃದ್ಧಿಗೆ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಎಫ್‌ಎಡಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಅವರು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಭಾರತ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಈ ನಿರ್ಣಯದ ಕಡೆಗೆ ಆಟೋ ಮೊಬೈಲ್ ವಲಯ, ವಿಶೇಷವಾಗಿ ಎಫ್‌ಎಡಿಎ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಅವರು ಲೋಕಸಭಾದ್ಯಕ್ಷ ಓಂ ಬಿರ್ಲಾ ಸ್ವಾಗತಿಸಿದ್ದಾರೆ.

ಆಟೋ ಮೊಬೈಲ್ ಕ್ಷೇತ್ರದಲ್ಲಿ ಕಾಲ ಕಾಲಕ್ಕೆ ಎದುರಾಗುವ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಸೌಲಭ್ಯವನ್ನು ಗ್ರಾಹಕರಿಗೆ ತಲುಪಿಸಬೇಕು ಎಂದು ಅವರು ಕರೆ ನೀಡಿದ್ದಾರೆ.