ಆಟೋ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ರೂ. ಘೋಷಣೆ ಮಾಡಿದ್ದಕ್ಕೆ ವಿಜಯ ಜೋಶಿ ಶ್ಲಾಘನೆ

ವಿಜಯಪುರ, ಮೇ.20-ಜನರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್ ಡೌನ್ ಜಾರಿಮಾಡಲಾಗಿರುವ ಕಾರಣ ಸರ್ಕಾರದಿಂದ ಈಗಾಗಲೇ ಒಟ್ಟು 1200 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪನವರು, ಆಟೋ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ರೂ. ಘೋಷಣೆ ಮಾಡಿದ್ದನ್ನು ಬಿಜೆಪಿ ಮಾಧ್ಯಮ ಪ್ರಮುಖ ವಿಜಯ ಜೋಶಿ ಶ್ಲಾಘಿಸಿದ್ದಾರೆ.
ರಾಜ್ಯ ಸರ್ಕಾರದಿಂದ 1,200ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದು ಜನಪರ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿ, ಸರ್ಕಾರಕ್ಕೆ ಅಭಿನಂದಿಸಿದ್ದಾರೆ.