ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆ

ರಾಯಚೂರು, ಮೇ.೨- ಕಳೆದ ಮೂರು ಸಲ ಶಾಸಕರಾಗಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೆ. ಆದರೂ ಮತದಾರರು ತಮ್ಮವಿರುದ್ಧ ಮತ ಹಾಕಿರುವುದು ಆಡಳಿತ ವಿರೋಧಿ ಅಲೆಯಿದೆ ಎಂಬುದನ್ನು ಬಯಲು ಗೊಳಿಸಿದೆ ಎಂದು
ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಹೇಳಿದರು.
ಬಹುತೇಕ ಕಡೆ ನಿರೀಕ್ಷೆಯಂತೆ ಮತ ಬಂದಿಲ್ಲ. ನಮ್ಮ ಪಕ್ಷದವರೇ ನಮ್ಮ ವಿರುದ್ಧ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಮುಖಂಡರಿಲ್ಲದ ಕಡೆಯೂ ಕಾಂಗ್ರೆಸ್ ಗೆ ಹೆಚ್ಚಿನ ಮತ ಬಂದಿವೆ.
ಸಿಎಂ ಪುತ್ರ ವಿಜಯೇಂದ್ರ ಅವರು ಮಸ್ಕಿ ಹೊಣೆಗಾರಿಕೆ ವಹಿಸಿಕೊಂಡಿದ್ದರೂ ಹಿನ್ನಡೆಯಾಗಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ.ಮಸ್ಕಿ ಮತದಾರರೇ ತಮ್ಮ ಆಡಳಿತಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಸ್ಕಿಯ ಸಾಕಷ್ಟು ಅಭಿವೃದ್ಧಿ ಮಾಡಿದ್ದೆ. ಆದರೂ ಮತದಾರರು ತಮ್ಮ ಕೈಹಿಡಿಯಲಿಲ್ಲ. ಮುಂದಿನ ಎರಡು ವರ್ಷ ಮಸ್ಕಿಯ ಮತದಾರರ ಪರ ಕೆಲಸ ಮಾಡುವೆ.ಸರಕಾರ ಬಿಜೆಪಿಯದ್ದೇ ಇರುವುದರಿಂದ ಮತದಾರರ ಬೇಕು ಬೇಡಗಳ ಅರಿತು ಕಾರ್ಯನಿರ್ವಹಿಸುವೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಕ್ಕೆ ಹಿನ್ನಡೆಯಾಗಿದೆ ಎಂದು ಅನಿಸಿಲ್ಲ. ಮತದಾರರು ತಮ್ಮ ಮೂರು ಅವಧಿಗೆ ಬೆಂಬಲಿಸಿದ್ದು ಬದಲಾವಣೆ ಬಯಸಿದ್ದಾರೆ ಎಂದು ತಿಸಿದರು.