ಆಡೇ ನಮ್ ಗಾಡು ಟೀಸರ್ ಅನಾವರಣ

ಆಡನ್ನು ದೇವರಾಗಿ  ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವುದನ್ನು “ಆಡೇ ನಮ್ ಗಾಡ್” ಚಿತ್ರದ ಮೂಲಕ  ಹಾಸ್ಯಾಸ್ಪದ  ಕಟ್ಟಿಕೊಟ್ಟದ್ದಾರೆ ಮುಂದಾಗಿದ್ದಾರೆ ಹಿರಿಯ ನಿರ್ದೇಶಕ  ನಿರ್ದೇಶಕ ಪಿ.ಎಚ್.ವಿಶ್ವನಾಥ್. ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್  ಬಂಡವಾಳ ಹೂಡಿದ್ದಾರೆ.

ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಅನೂಪ್ ಶೂನ್ಯ, ಸಾರಿಕ ರಾವ್, ಬಿ ಸುರೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆ ವೇಳೆ ಮಾತಿಗಿಳಿದ ನಿರ್ದೇಶಕ  ಪಿ.ಎಚ್.ವಿಶ್ವನಾಥ್,  ಹಂದಿಯನ್ನು ವರಾಹ ಎಂದು ಪೂಜೆ ಮಾಡುತ್ತೇವೆ. ಹಾವು, ಕಪ್ಪೆ ಮೊಸಳೆ ಎಲ್ಲವನ್ನೂ ಪೂಜೆ ಮಾಡುತ್ತವೆ. ಪೂಜೆ ಮಾಡದ ಪ್ರಾಣಿಗಳು ಇಲ್ಲ. ಆಂದ್ರದ ಊರೊಂದರಲ್ಲಿ ಚೇಳು ಸ್ವಾಮಿ ದೇಗುಲವಿದೆ ಜೀವಂತ ಚೇಳುಗಳನ್ನು ಪೂಜೆ ಮಾಡುತ್ತಾರೆ. ಈ ಬಗ್ಗೆ ಯೋಚನೆ ಮಾಡುತ್ತಾ ಕಂಡ ಒಬ್ಬ ವ್ಯಕ್ತಿ ಮತ್ತು ನನಗೇ ಆದ ಅನುಭವಗಳ ಆಧಾರದ ಮೇಲೆ ಆಡು‌ ಕೂಡ ಒಂದು ದೇವರು ಆಗಬಹುದು ಅನ್ನಿಸಿ ಅದನ್ನೇ ಚಿತ್ರವಾಗಿಸಿದ್ದೇವೆ ಎನ್ನುವ ಮಾಹಿತಿ ನೀಡಿದರು.

ಮೂಢನಂಬಿಕೆ ನಂಬಿಕೊಂಡು ಹೋಗುವ ಜನರ ಹಿಂದೆ ಇಡೀ ಸಿನಿಮಾವಿದೆ. ನಾಲ್ಕು ಜನ ಯುವಕರ ಜೀವನದಲ್ಲಿ  ಆಡು ಬಂದಾಗ ಏನಾಗುತ್ತದೆ ಎನ್ನುವುದು ಚಿತ್ರದ ತಿರುಳು. ನಾಲ್ಕೂ ಜನ ಯುವಕರು ಯಾವ ನುರಿತ ಕಲಾವಿದರಿಗಿಂತ ಕಡಿಮೆ ಇಲ್ಲದಂತೆ ನಟಿಸಿದ್ದು, ಚಿತ್ರವನ್ನು ಮನರಂಜನೆಯೊಂದಿಗೆ ಪ್ರೇಕ್ಷಕರಿಗೆ ಖುಷಿಕೊಡುವ ರೀತಿಯಲ್ಲಿ, ಕೊನೆಯವರೆಗೂ ಹಾಸ್ಯಮಯವಾಗಿ ಕಟ್ಟಿಕೊಡಲಾಗಿದೆ ಚಿತ್ರ ಬಿಡುಗಡೆಗೆ ಸಜ್ಜಾಗಿದೆ ಎಂದರು.

ನಿರ್ಮಾಪಕ ಪ್ರೊ.ಬಿ.ಬಸವರಾಜ್ ಮಾತನಾಡಿ, ಮೊದಲಿನಿಂದಲೂ ಸಿನಿಮಾ ನಿರ್ಮಾಣ ಮಾಡುವ ಆಸೆ ಇತ್ತು.  ಪಿ ಎಚ್ ವಿಶ್ವನಾಥ್  ಮೂಲಕ‌ನೆರವೇರಿದೆ.  ಆರು ತಿಂಗಳು ಲೋಕೇಷನ್ ನೋಡಿದೆವು. ಮೈಸೂರು ಹಾಗು ಬೆಂಗಳೂರಿನ ಸುತ್ತ ಮುತ್ತ ಯಾವ ರೀತಿಯ ಅಡಚಣೆಯೂ ಇಲ್ಲದೆ ಸರಾಗವಾಗಿ ಚಿತ್ರ ಮುಗಿದಿದೆ ಎಂದರು.

ನಟ ನಟರಾಜ್ ಮಾತನಾಡಿ,  ದಿಗ್ಗಜರ ಜೊತೆ ಸಿನಿಮಾ ಮಾಡಿರುವುದು ಖುಷಿ ಕೊಟ್ಟಿದೆ.ಹಾಡು, ಸಿನಿಮಾ ಎಲ್ಲವೂ ಚೆನ್ನಾಗಿ ಮೂಡಿಬಂದಿದೆ ಎಂದು ಹೇಳಿದರು. ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನವಿದೆ.

ದೊಡ್ಡ ಸಾಹಸ

ಕೊರೋನಾ ನಂತರದ ಕಾಲಘಟ್ಟದಲ್ಲಿ ಸಿನಿಮಾ ಮಾಡುವುದು ಸುಲಭದ ಕೆಲಸವಲ್ಲ. ಮೊದಲು ಸುಲಭ ಇತ್ತು ಅಂತಲ್ಲ. ಬಸವರಾಜ್ ಹಾಗೂ ವಿಶ್ವನಾಥ್ ಅವರು ದೊಡ್ಡ ಸಾಹಸ ಮಾಡಿದ್ದಾರೆ ಎಂದರು ಹಿರಿಯ ನಟ ಬಿ.ಸುರೇಶ್. ವಿಶಿಷ್ಟವಾದ ಕಥೆ. ಪಿ ಎಚ್ ವಿಶ್ವನಾಥ್ ಅವರ ಬಗ್ಗೆ ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಂಚಮವೇದ ಚಿತ್ರದಿಂದ ಇಲ್ಲಿವರೆಗೂ ಹಲವಾರು ಬಗೆಯ ಸಿನಿಮಾ ಮಾಡಿದ್ದಾರೆ. ಹೊಸಬರಿಗೆ ನಟನೆಯ ಭಾಷೆ, ಸಿನಿಮಾ ಹೇಳಿಕೊಟ್ಟಿದ್ದಾರೆ ಎಂದರು.