ಆತ್ಮನಿರ್ಭರ್ ಯೋಜನೆ ಜಾಗೃತಿ ಜಾಥಾಕ್ಕೆ ಚಾಲನೆ

ಹನೂರು, ನ.4: ಪ್ರಧಾನಮಂತ್ರಿ ಆತ್ಮನಿರ್ಭರ್ ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಕಿರು ಸಾಲವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪಪಂ ಮುಖ್ಯಾಧಿಕಾರಿ ಮೂರ್ತಿ ತಿಳಿಸಿದರು.
ಪಟ್ಟಣದಲ್ಲಿ ಆತ್ಮನಿರ್ಭರ್ ಯೋಜನೆಯ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶವುಎದುರಿಸುತ್ತಿರುವಕರೋನಾ ಸಂಕಷ್ಟಕಾಲದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯ ನೀಡುವ ನಿಟ್ಟಿನಲ್ಲಿ ಹಾಗೂ ಇವರಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ಸಲುವಾಗಿ ಸರ್ಕಾರ ವಿಶೇಷ ಕಿರುಸಾಲ ಯೋಜನೆಯಡಿ 10 ಸಾವಿರ ರೂ. ಸಾಲ ಸೌಲಭ್ಯವನ್ನು ನೀಡಲುಅರ್ಜಿ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳು ಇನ್ನೆರಡು ದಿನಗಳೊಳಗಾಗಿ ಕಚೇರಿಗೆ ಆಗಮಿಸಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಗುರುತಿನ ಚೀಟಿ ಹಾಗೂ ಇನ್ನಿತರೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಕಚೇರಿಗೆ ಬಂದು ಸಂಪರ್ಕಿಸುವಂತೆ ತಿಳಿಸಿದರು.ಬಳಿಕ ಈ ಬಗ್ಗೆ ಧ್ವನಿವರ್ಧಕದ ಮೂಲಕ ಪಪಂ ವ್ಯಾಪ್ತಿಯಲ್ಲಿಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಅನ್ಸರ್‍ಖಾನ್, ಪಪಂ ಸಮುದಾಯ ಸಂಘಟನಾಧಿಕಾರಿ ಪರಶಿವಮೂರ್ತಿ ಹಾಗೂ ಇನ್ನಿತರರು ಹಾಜರಿದ್ದರು.