ಆತ್ಮನಿರ್ಭರ ಆಹಾರ ಸಂಸ್ಕರಣೆ ಯೋಜನೆಗಳ ಸದುಪಯೋಗ ಪಡೆಯಿರಿಃ ಸಂತೋಷ ಸಪ್ಪಂಡಿ

ವಿಜಯಪುರ, ಜು.20-ಆತ್ಮನಿರ್ಭರ ಭಾರತ ಯೋಜನೆ ಅಡಿಯಲ್ಲಿ ಲಭ್ಯವಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಯೋಜನೆಗಳ ಸದುಪಯೋಗ ಎಲ್ಲರು ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ ಸಪ್ಪಂಡಿ ಹೇಳಿದರು.
ಅವರು ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗ ಹಾಗೂ ಇಂಡಿಯ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಆಯೋಜಿಸಿದ್ದ ಆತ್ಮನಿರ್ಭರ ಭಾರತ: ಆಹಾರ ಕ್ಷೇತ್ರದಲ್ಲಿ ಸ್ವುದ್ಯೋಗದ ಅವಕಾಶಗಳು ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಲಿಂಬೆಗೆ ಸಂಬಂಧಿಸಿದಂತೆ ಅದರ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗಾಗಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಲಿಂಬೆ ಉತ್ಪನ್ನಗಳ ಗುಣಮಟ್ಟ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಿಎಮ್‍ಎಫ್‍ಎಮ್‍ಇ ನಜಿಲ್ಲಾ ಸಂಪನ್ಮೂಲ ವ್ಯಕ್ತಿಸಿದ್ದು ಪೂಜಾರಿ ಮಾತನಾಡಿ, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೊಜನೆಯಗುರಿ, ರೂಪುರೇಷೆಗಳ ಕುರಿತು ಸಮಗ್ರವಾಗಿ ವಿವರಿಸಿದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿಭಾಗದ ಮುಖ್ಯಸ್ಥೆ ಡಾ.ರೇಣುಕಾ ಮೇಟಿ, ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಆ ಯೊಜನೆಯ ಫಲಾನುಭವಿಗಳಾಗಿ ಸ್ವಾವಲಂಬಿ ಜೀವನದ ಕನಸಿಗೆ ಈ ಕಾರ್ಯಾಗಾರವು ದಾರಿದೀಪವಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸವಿತಾ ಹುಲಮನಿ ಅತಿಥಿಗಳನ್ನು ಪರಿಚಯಿಸಿದರು. ಡಾ. ವಿನುತ ಪಾಟೀಲ ಸ್ವಾಗತಿಸಿದರು. ಡಾ. ನಟರಾಜ ದುರ್ಗಣ್ಣವರ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಬಿ. ಕೆ.ತುಳಸಿಮಾಲ, ಕುಲಸಚಿವ ಪ್ರೊ.ರಮೇಶ ಕೆ, ಆರ್ಥಿಕ ಅಧಿಕಾರಿ ಪ್ರೊ. ಎಸ್.ಬಿ. ಕಾಮಶೆಟ್ಟಿ, ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.