ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು, ಜೂ.೯- ನಗರದ ಕದ್ರಿ ಪಿಂಟೊ ಲೇನ್ ನಿವಾಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಇಂದು (ಬುಧವಾರ) ಮುಂಜಾನೆ ಬೆಳಕಿಗೆ ಬಂದಿದೆ.
ಕದ್ರಿ ಪಿಂಟೋ ಲೇನ್ ನಿವಾಸಿಗಳಾದ, ತಬಲ ಕಲಾವಿದ ಸುರೇಶ್ ಮತ್ತು ಅವರ ಪತ್ನಿ ವಾಣಿ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ವಾಣಿ ಖಾಸಗಿ ಕಾಲೇಜೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸುರೇಶ್ ಬಾವಿಗೆ ಹಾರಿದರೆ, ವಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ವ್ಯವಹಾರ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.