ಆತ್ಮಹತ್ಯೆ ಯತ್ನ ಚಿಕಿತ್ಸೆ ಫಲಿಸದೆಎಸಿ ಕಚೇರಿ ಎಸ್‌ಡಿಎ ವಾಸಿಂ ಸಾವು

(ಸಂಜೆವಾಣಿ ಪ್ರತಿನಿಧಿಯಿಂದ)
ರಾಯಚೂರು,ಫೆ.೯- ನೀರಿಗೆ ಆಸಿಡ್ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಉಪ ವಿಭಾಗಾಧಿಕಾರಿ ಕಚೇರಿಯ ಎಸ್‌ಡಿಎ ವಾಸಿಂಚೌಧರಿ ಚಿಕಿತ್ಸೆ ಫಲಕಾರಿಯಾಗದೆ ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೇಲ್ನೋಟಕ್ಕೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಎಸ್‌ಡಿಎ ವಾಸಿಂಚೌಧರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆ ನಂತರವೇ ಸತ್ಯಾಂಶ ಹೊರ ಬರಲಿದೆ.
ಎಸ್‌ಡಿಎ ವಾಸಿಂಚೌಧರಿ ನಿನ್ನೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ನಿನ್ನೆ ಮಧ್ಯಾಹ್ನ ಸ್ಟೇಡಿಯಂನ ಬ್ಯಾಸ್ಕೆಟ್‌ಬಾಲ್ ಕೋರ್ಟ್ ಬಳಿ ನಡೆದಿದೆ.
ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಉಪ ವಿಭಾಗಾಧಿಕಾರಿ ಕಚೇರಿಯ ವಾಸಿಂಚೌಧರಿ ಎಂದು ಗುರುತಿಸಲಾಗಿತ್ತು. ಕಳೆದ ಕೆಲ ವರ್ಷಗಳಿಂದ ವಾಸಿಂ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಜಮೀನು ದಾಖಲೆಗಳ ನಿರ್ವಹಣೆ ವಿಭಾಗದಲ್ಲಿ ಡಿ ದರ್ಜೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು.
ಕುಡಿಯುವ ನೀರಿನ ಬಾಟಲ್‌ಗೆ ಆಸಿಡ್ ಬೆರೆಸಿ ವಾಸಿಂ ಅಕ್ರಂ ಕುಡಿದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ನಿನ್ನೆ ಮಧ್ಯಾಹ್ನದ ವೇಳೆ ಕ್ರೀಡಾಂಗಣದ ಬಳಿಯ ಬ್ಯಾಸ್ಕೆಟ್‌ಬಾಲ್ ಕೋರ್ಟ್ ಬಳಿ ಆಸಿಡ್ ಮಿಶ್ರಿತ ನೀರು ಕುಡಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ವಿಭಾಗಾಧಿಕಾರಿ ಕಚೇರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಿಬ್ಬಂದಿ ವಾಸಿಂನನ್ನು ನಗರದ ಸಂಕಲ್ಪ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಿದ್ದಾರೆ.
ಸದ್ಯ ವಾಸಿಂಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ನಗರದ ಪಶ್ಚಿಮ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.