‘ಆತ್ಮಾವಲೋಕನ ಮಾಡಿಕೊಳ್ಳಿ’ ಸೋನಿಯಾಗೆ ಥಾಮಸ್ ಪತ್ರ

ನವದೆಹಲಿ,ಏ.೨- ಕಾಂಗ್ರೆಸ್ ಪಕ್ಷದ ಕಾರ್ಯವೈಖರಿ ಕುರಿತಂತೆ ೨೩ ಹಿರಿಯ ನಾಯಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದ ಬೆನ್ನಲ್ಲೇ ಇದೀಗ ಮತ್ತೊಬ್ಬ ಹಿರಿಯ ನಾಯಕ ರಂಜಿ ಥಾಮಸ್ ಪಕ್ಷದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಪರಿಸ್ಥಿತಿ ಇತ್ತೀಚಿನ ದಿನಗಳಲ್ಲಿ ಹದಗೆಟ್ಟಿದ್ದು ಪಕ್ಷದ ಅನೇಕ ಕಾರ್ಯಕರ್ತರು ತಮ್ಮನ್ನು ಪಕ್ಷದ ಸದಸ್ಯರಿಂದ ಘೋಷಿಸಿಕೊಳ್ಳಲು ಸಿದ್ದರಿಲ್ಲ ಹೀಗಾಗಿ ಪ್ರಾಮಾಣಿಕ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರಸ್ತುತ ಹೊರಗಿನಿಂದ ಮತ್ತು ಒಳಗಿನಿಂದ ಅನಿರೀಕ್ಷಿತ ಸವಾಲುಗಳನ್ನು ಎದುರಿಸುತ್ತಿದೆ ಹೀಗಾಗಿ ಪ್ರಾಮಾಣಿಕ ಆತ್ಮಾವಲೋಕನ ಮಾಡಿಕೊಳ್ಳುವ ತುರ್ತು ಅನಿವಾರ್ಯ ಪಕ್ಷಕ್ಕಿದೆ ಎಂದು ಅವರು ಹೇಳಿದ್ದಾರೆ.
ಎಐಸಿಸಿ ಮಾಜಿ ಕಾರ್ಯದರ್ಶಿಯೂ ಆಗಿರುವ ರಂಜಿ ಥಾಮಸ್ ಅವರು ಅಹಮದ್ ಪಟೇಲ್, ಅಂಬಿಕಾ ಸೋನಿ, ಆಸ್ಕರ್ ಫರ್ನಾಂಡಿಸ್ ಅವರ ಜೊತೆ ನಿಕಟವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದರು.
ವೃತ್ತಿಯಲ್ಲಿ ವಕೀಲರಾಗಿರುವ ರಂಜಿತಾ ಮತ್ತು ಅವರನ್ನು ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಅರುಣಾಚಲಪ್ರದೇಶದ ಅಡ್ವಕೇಟ್ ಜನರಲ್ ಆಗಿ ನೇಮಕ ಮಾಡಿತ್ತು.
ಕಾಂಗ್ರೆಸ್ ಪಕ್ಷ ಒಳಗೆ ಮತ್ತು ಹೊರಗೆ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಈ ಮೂಲಕ ಪಕ್ಷಕ್ಕೆ ಆಗುವ ಹಾನಿಯನ್ನು ತಪ್ಪಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘವಾದ ಇತಿಹಾಸವಿದೆ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾದ ಪಕ್ಷ ಎಂದು ಕವಲುದಾರಿಯಲ್ಲಿದೆ ಪಕ್ಷವನ್ನು ಸರಿದಾರಿಗೆ ತರುವ ಕೆಲಸವನ್ನು ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡುವ ಜೊತೆಗೆ ಹಿರಿಯ ನಾಯಕರನ್ನು ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಅಗತ್ಯ ಮತ್ತು ಅನಿವಾರ್ಯ ಇದೆ ಅಧ್ಯಕ್ಷರಾಗಿ ಕೆಲಸ ಮಾಡಿ ಎಂದು ಅವರು ಹೇಳಿದ್ದಾರೆ.