
ರೈತನಿಂದ ರೈತನಿಗಾಗಿ ಮಾಡಿರುವ “ ಆದರ್ಶ ರೈತ” ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಟಿ ಪ್ರಿಯಾ ಹಾಸನ್, ವೇಗಸ್ ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಮತ್ತಿತರರು ಆಗಮಿಸಿ ಚಿತ್ರಕ್ಕೆ ಶುಭಹಾರೈಸಿದರು.
ಡಾ.ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ ಚಿತ್ರದಲ್ಲಿ ಕುಟುಂಬವೇ ಕೃಷಿಕರ ಕುಟುಂಬದ ನಮ್ಮದು, ರೈತರ ಕುರಿತು ಸಿನಿಮಾ ಮಾಡುವ ಆಸೆ ಇತ್ತು,ಅದಕ್ಕೆ ನಿರ್ದೇಶಕ ರಾಜೇಂದ್ರ ಕೊಣಿದೆಲ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣದ ಜೊತೆ ಜೊತೆಗೆ ಪ್ರಮುಖ ಪಾತ್ರ ಕೂಡ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದರು.
ನಿರ್ದೇಶಕ ರಾಜೇಂದ್ರ ಕೊಣದೆಲ ಮಾತನಾಡಿ, ಚಿತ್ರದಲ್ಲಿ ರೈತ ಹೆಚ್ಚಿನ ಬಡ್ಡಿಗೆ ಸಾಲ ಮಾಡಬಾರದು. ಸರ್ಕಾರ ಬ್ಯಾಂಕ್ ನಿಂದ ನೀಡುವ ಸಾಲವನ್ನೇ ಪಡೆಯಬೇಕು. ಸರ್ಕಾರದ ಸವಲತ್ತು ಬಳಸಿಕೊಳ್ಳಬೇಕು ಎನ್ನುವ ಸಂದೇಶವೂ ಇದೆ ಎಂದರು.
ಕಲಾವಿದರಾದ ರೇಖಾ ದಾಸ್,ಸಿದ್ಧಾರ್ಥ್, ಮೈಸೂರು ಸುಜಾತ, ಸೂಫಿಯಾ,ಖುಷಿ ಮೆಹ್ತಾ, ಸಂಗೀತ, ಎಂ.ವಿ.ಸುರೇಶ್ ಹಾಗೂ ಚಿತ್ರಕ್ಕೆ ಸಂಗೀತ ನೀಡಿರುವ ಮುರಳಿಧರ್ ನಾವಡ, ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಮುಂತಾದವರು ಕುರಿತು ಮಾಹಿತಿ ನೀಡಿದರು.