ಆದರ್ಶ ವ್ಯಕ್ತಿಯಾಗಲು ರಾಮಾಯಣವನ್ನು ಓದಬೇಕು, ವಾಲ್ಮೀಕಿ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು

ಮೈಸೂರು,ಅ.31-ಆದರ್ಶ ವ್ಯಕ್ತಿಗಳಾಗಬೇಕಾದರೆ ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಾಣವನ್ನು ಓದಬೇಕು ಹಾಗೂ ವಾಲ್ಮೀಕಿ ಅವರ ಆದರ್ಶಗಳನ್ನು ತಿಳಿದುಕೊಳ್ಳಬೇಕು. ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ನಗರಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ನಗರ ಹಾಗೂ ತಾಲೂಕು ನಾಯಕ ಜನಾಂಗದ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಬೇಕೆಂಬ ಸಲುವಾಗಿ ಪ್ರತಿವರ್ಷ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡುವಾಗ ತಜ್ಞರನ್ನು ಕರೆಸಿ ಉಪನ್ಯಾಸ ನೀಡುವ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ವಿಶೇಷವಾಗಿ ಎಲ್ಲ ಶಾಲೆ-ಕಾಲೇಜುಗಳಲ್ಲಿ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳನ್ನು ಯುವಕರಿಗೆ ತಿಳಿಸಬೇಕು ಅಂತ ಆದೇಶ ಕೊಟ್ಟಿರುವುದು ಸಂತಸದ ವಿಷಯ ಎಂದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕಗಳಿಸಿದ ತರಳಬಾಳು ಶಾಲೆಯ ವಿದ್ಯಾರ್ಥಿನಿ ಅಶ್ವಿನಿ ಗೆ ಸನ್ಮಾನಿಸಿ ಒಂದು ಲಕ್ಷ ರೂ. ಚೆಕ್ ಅನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಉಪಮಹಾಪೌರರಾದ ಸಿ.ಶ್ರೀಧರ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಜಿಪಂ ಸಿಇಒ ಭಾರತಿ, ನಾಯಕ ಜನಾಂಗದ ಮುಖಂಡರು ಉಪಸ್ಥಿತರಿದ್ದರು.