
ಜಗಳೂರು.ಜು.16; ಆದಿಜಾಂಬವ ಮಾದಿಗ ಸಮಾಜದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಸಮುದಾಯದ ಮುಖಂಡರು ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ರಕ್ಷ ಸಮಿತಿ ಸದಸ್ಯರಾದ ಪೂಜಾರಿ ಸಿದ್ದಪ್ಪ ಹೇಳಿದರು.ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ತರಗತಿಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಜು.16 ರ ಬೆಳಿಗ್ಗೆ 11:00 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮಕ್ಕೆ ಹಿರಿಯೂರು ಆದಿ ಜಾಂಬವ ಸಂಸ್ಥಾನ ಮಠದ ಷಡಕ್ಷರಿ ಮುನಿ ಸ್ವಾಮೀಜಿಗಳು ಜಗಳೂರಿನ ಶಾಸಕರಾದ ಎಸ್.ವಿ ರಾಮಚಂದ್ರ ಸೇರಿದಂತೆ ತಾಲೂಕಿನ ಎಲ್ಲಾ ಗಣ್ಯಮಾನ್ಯರು ಆಗಮಿಸಲಿದ್ದಾರೆಂದರು. ನಂತರ ದಲಿತ ಮುಖಂಡರಾದ ಜಿ.ಎಚ್ ಶಂಭುಲಿಂಗಪ್ಪ ಮಾತನಾಡಿ ಜಗಳೂರು ತಾಲೂಕಿನ ಎಲ್ಲಾ ಸಮಾಜದ ಮುಖಂಡರು ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಎಲ್ಲಾ ಪಕ್ಷದ ರಾಜಕೀಯ ಮುಖಂಡರು ಮಾದಿಗ ಸರ್ಕಾರಿ ನೌಕರರು ವಕೀಲರು ಸಂಘಟನೆ ಪದಾಧಿಕಾರಿಗಳು ಸಂಘ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆ ಹಾಗೂ ನಮ್ಮ ಮಾದಿಗ ಸಮುದಾಯದ ಎಲ್ಲಾ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಗೊಳಿಸಲು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರುಈ ಸಂದರ್ಭದಲ್ಲಿ ಆದಿಜಾಂಬವ ವಿದ್ಯಾರ್ಥಿನಿಲಯದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಹನುಮಂತಪುರ. ಕಾರ್ಯದರ್ಶಿ ರಾಜನಹಟ್ಟಿ ಚಂದ್ರಪ್ಪ. ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೈ.ರಾಜಶೇಖರ್ಸೂರಗೊಂಡನಹಳ್ಳಿ ಕುಬೇಂದ್ರಪ್ಪ.ಸಂಚಾಲಕರಾದ ಮಲ್ಲೇಶ್ ಪೂಜಾರ್. ಸೇರಿದಂತೆ ಎಲ್ಲಾ ಮಾದಿಗ ಸಮುದಾಯದ ಮುಖಂಡರು ಭಾಗವಹಿಸಿದ್ದರು